ಹಿಡಿವೆನೆಂದಡೆ ಹಿಡಿಗೆ ಬಾರನವ್ವಾ.

Category: ವಚನಗಳು

Author: ಅಕ್ಕಮಹಾದೇವಿ

ಹಿಡಿವೆನೆಂದಡೆ ಹಿಡಿಗೆ ಬಾರನವ್ವಾ.
ತಡೆವೆನೆಂದಡೆ ಮೀರಿ ಹೋಹನವ್ವಾ.
ಒಪ್ಪಚ್ಚಿ ಅಗಲಿದಡೆ ಕಳವಳಗೊಂಡೆ.
ಚೆನ್ನಮಲ್ಲಿಕಾರ್ಜುನನ ಕಾಣದೆ ಆನಾರೆಂದರಿಯೆ ಕೇಳಾ, ತಾಯೆ.