ಅಂಗಯ್ಯ ಒಳಗಣ ಲಿಂಗವ ನೋಡುತ್ತ,

Category: ವಚನಗಳು

Author: ಬಸವಣ್ಣ

ಅಂಗಯ್ಯ ಒಳಗಣ ಲಿಂಗವ ನೋಡುತ್ತ,
ಕಂಗಳು ಕಡೆಗೋಡಿವರಿಯುತ್ತ ಸುರಿಯುತ್ತ ಎಂದಿಪ್ಪೆನೊ
ನೋಟವೆ ಪ್ರಾಣವಾಗಿ ಎಂದಿಪ್ಪೆನೊ ಕೂಟವೇ ಪ್ರಾಣವಾಗಿ
ಎಂದಿಪ್ಪೆನೊ ಎನ್ನ ಅಂಗವಿಕಾರದ ಸಂಗವಳಿದು,
ಕೂಡಲಸಂಗಯ್ಯಾ, ಲಿಂಗ ಲಿಂಗವೆನುತ್ತ.