ಅಂಗದ ಮೇಲಣ ಲಿಂಗ ಹಿಂಗಿ ಬಂದ

Category: ವಚನಗಳು

Author: ಬಸವಣ್ಣ

ಅಂಗದ ಮೇಲಣ ಲಿಂಗ ಹಿಂಗಿ ಬಂದ ಸುಖವನಾರಿಗರ್ಪಿಸುವೆ ಹಿಂಗಲಾಗದು,
ಭಕ್ತಿಪಥಕ್ಕೆ ಸಲ್ಲದಾಗಿ, ಹಿಂಗಲಾಗದು,
ಶರಣಪಥಕ್ಕೆ ಸಲ್ಲದಾಗಿ, ಕೂಡಲಸಂಗಮದೇವರ
ಹಿಂಗಿ ನುಂಗಿದುಗುಳು ಕಿಲ್ಬಿಷ.