ಅಂಗದ ಮೇಲೆ ಲಿಂಗ ಆಯತವಾಗಿ
Category: ವಚನಗಳು
Author: ಬಸವಣ್ಣ
ಅಂಗದ ಮೇಲೆ ಲಿಂಗ ಆಯತವಾಗಿ ಲಿಂಗಾರ್ಚನೆಯ ಮಾಡಿದಡೆ ಭವ ಹಿಂಗದೆಂದು,
ಪ್ರಾಣದ ಮೇಲೆ ಲಿಂಗ[ಸ್ವಾ]ಯತವ ಮಾಡಿ ಎನ್ನಂತರಂಗ ಶುದ್ಧವ ಮಾಡಿ ಲಿಂಗೈಕ್ಯದ ಹೊಲಬ ತೋರಿದನಯ್ಯಾ,
ಚೆನ್ನಬಸವಣ್ಣನು. ಕಾಯದ ಕಳವಳವು ದಾಸೋಹದ ಮುಖದಲ್ಲಿ ಅಲ್ಲದೆ ಹರಿಯದೆಂದು
ಜಂಗಮಮುಖಲಿಂಗವಾಗಿ ಬಂದು ಎನ್ನ ಶಿಕ್ಷಿಸಿ ರಕ್ಷಿಸಿ ಎನ್ನ ಸಂಸಾರದ ಪ್ರಕೃತಿಯ ಹರಿದನಯ್ಯಾ, ಪ್ರಭುದೇವರು.
ಕೂಡಲಸಂಗಮದೇವರಲ್ಲಿ ಪ್ರಭುದೇವರ ಚೆನ್ನಬಸವಣ್ಣನ ಕರುಣದಿಂದಲಾನು ಬದುಕಿದೆನು.