ಅಂಗದಲಳವಟ್ಟ ಲಿಂಗಕ್ಕೆ ಅಂಗವೆ ಭಾಜನ,

Category: ವಚನಗಳು

Author: ಬಸವಣ್ಣ

ಅಂಗದಲಳವಟ್ಟ ಲಿಂಗಕ್ಕೆ ಅಂಗವೆ ಭಾಜನ,
ಪ್ರಾಣದ ಮೇಲಣ ಲಿಂಗಕ್ಕೆ ನಿರ್ಭಾವವೆ ಭಾಜನ.
ಅರಿವಿನ ಮೇಲಣ ಲಿಂಗಕ್ಕೆ ನಿರ್ಭಾವವೆ ಭಾಜನ ಕೂಡಲಸಂಗಮದೇವಯ್ಯಾ,
ಪ್ರಭುದೇವರು ಆರೋಗಣೆಯ ಮಾಡುವಡೆ
ಭಕ್ತಿಪರಿಯಾಣವಲ್ಲದೆ ಬೇರೆ ಭಾಜನವ ಕಾಣೆನು.