ಅಯ್ಯಾ, ಎನ್ನ ಕಾಯದಲ್ಲಿ ಮಡಿವಾಳನ ತೋರಿದ,

Category: ವಚನಗಳು

Author: ಬಸವಣ್ಣ

ಅಯ್ಯಾ, ಎನ್ನ ಕಾಯದಲ್ಲಿ ಮಡಿವಾಳನ ತೋರಿದ,
ಎನ್ನ ಮನದಲ್ಲಿ ತನ್ನ ನಿಲವ ತೋರಿದ,
ಎನ್ನ ಅರಿವಿನಲ್ಲಿ ನಿಮ್ಮ ತೋರಿದ,
ಇಂತೀ ತ್ರಿವಿಧಸ್ವಾಯತವನು ಎನ್ನ
ಸರ್ವಾಂಗದಲ್ಲಿ ಪ್ರತಿಷ್ಠಿಸಿ ತೋರಿದ.
ಕೂಡಲಸಂಗಮದೇವಯ್ಯಾ, ಚೆನ್ನಬಸವಣ್ಣನ
ಕರುಣದಿಂದ ಮಡಿವಾಳನೆಂಬ ಪರುಷ ಸಾಧ್ಯವಾಯಿತ್ತೆನಗೆ.