ಅಯ್ಯಾ, ನಾನು ದಾಸೋಹವ ಮಾಡುವೆನಲ್ಲದೆ,
Category: ವಚನಗಳು
Author: ಬಸವಣ್ಣ
ಅಯ್ಯಾ, ನಾನು ದಾಸೋಹವ ಮಾಡುವೆನಲ್ಲದೆ,
ಸಮಯವನರಿಯೆ, ಅಯ್ಯಾ, ನಾನು ಭಕ್ತಿಯ ಮಾಡುವೆನಲ್ಲದೆ,
ಭಾವವನರಿಯೆ. ಸ್ಥಳಕುಳವ ವಿಚಾರಿಸಿದಡೆ, ಎನ್ನಲ್ಲಿ ಏನೂ ಹುರುಳಿಲ್ಲ,
ನಿಮ್ಮ ಶರಣರ ಸೋಂಕಿನಲ್ಲಿ ಶುದ್ಧನಾದೆನು. ಕೂಡಲಸಂಗಮದೇವರು ಸಾಕ್ಷಿಯಾಗಿ,
ಮಡಿವಾಳ ಮಾಚಿತಂದೆಗಳ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು.