ಅಯ್ಯಾ, ನಿಮ್ಮ ಮಹಾನುಭಾವಿಗಳ ಸಂಗದಿಂದೆನ್ನ

Category: ವಚನಗಳು

Author: ಬಸವಣ್ಣ

ಅಯ್ಯಾ, ನಿಮ್ಮ ಮಹಾನುಭಾವಿಗಳ ಸಂಗದಿಂದೆನ್ನ
ತನು ಶುದ್ಧವಾಯಿತ್ತು, ಮನ ಶುದ್ಧವಾಯಿತ್ತು, ಧನ ಶುದ್ಧವಾಯಿತ್ತು,
ಎನ್ನ ಸರ್ವಾಂಗಶುದ್ಧವಾಯಿತ್ತು, ವಾರಿಕಲ್ಲ ಪುತ್ಥಳಿಯನಪ್ಪಿಕೊಂಡಂತಾಯಿತ್ತು.
ಕೂಡಲಸಂಗಮದೇವಾ, ನಿಮ್ಮ ಶರಣ ಪ್ರಭುದೇವರ ಕೃಪೆಯಿಂದ ಎನಗೊದಗಿದ ಘನವನೇನೇಂದುಪಮಿಸುವೆ