ಅಯ್ಯಾ, ನಿಮ್ಮ ಶರಣರು ಪರಮಸುಖಿಗಳಯ್ಯಾ.
Category: ವಚನಗಳು
Author: ಬಸವಣ್ಣ
ಅಯ್ಯಾ, ನಿಮ್ಮ ಶರಣರು ಪರಮಸುಖಿಗಳಯ್ಯಾ.
ಅಯ್ಯಾ, ನಿಮ್ಮ ಶರಣರು ಕಾಯವೆಂಬ ಕರ್ಮಕ್ಕೆ ಹೊದ್ದದ ನಿಷ್ಕರ್ಮಿಗಳಯ್ಯಾ.
ಅಯ್ಯಾ, ನಿಮ್ಮ ಶರಣರು ಮನದಲ್ಲಿ ನಿರ್ಲೇಪಜ್ಞಾನಿಗಳಯ್ಯಾ. ಕೂಡಲಸಂಗಮದೇವಯ್ಯಾ,
ನಿಮ್ಮ ಶರಣರ ಘನವನೆನಗೆ ಹೇಳಲು, ನಾನು ಕೇಳಲಮ್ಮದೆ ನಮೋ ನಮೋ ಎನುತಿರ್ದೆನು ಕಾಣಾ, ಪ್ರಭುವೆ.