ಅಯ್ಯಾ, ನಿಮ್ಮ ಶರಣರು ಬಂದೆನ್ನ ಅಂಗಳದೊಳಗೆ

Category: ವಚನಗಳು

Author: ಬಸವಣ್ಣ

ಅಯ್ಯಾ, ನಿಮ್ಮ ಶರಣರು ಬಂದೆನ್ನ ಅಂಗಳದೊಳಗೆ
ರಕ್ಷಿಸಿಹೆವೆಂದಿರಲು ನಾನು ತೆರಹು-ಮರಹಾಗಿರ್ದು ಕೆಟ್ಟೆನಯ್ಯಾ,
ನಾನು ಕೆಟ್ಟ ಕೇಡಿಂಗೆ ಕಡೆಯಿಲ್ಲವಯ್ಯಾ. ಕೂಡಲಸಂಗಮದೇವಾ,
ಎನ್ನ ಭಕ್ತಿ ಸಾವಿರ ನೋಂಪಿಯ ನೋಂತು ಹಾದರದಲ್ಲಿ ಅಳಿದಂತಾಯಿತ್ತಯ್ಯಾ.