ಅಯ್ಯಾ, ನೀವೆನ್ನ ಬಲ್ಲಿರಲ್ಲದೆ ನಾ ನಿಮ್ಮ

Category: ವಚನಗಳು

Author: ಬಸವಣ್ಣ

ಅಯ್ಯಾ, ನೀವೆನ್ನ ಬಲ್ಲಿರಲ್ಲದೆ ನಾ ನಿಮ್ಮ
ಬಲ್ಲೆನೆ ನಿಮ್ಮ ನಿಲವ ನೋಡಿಹೆನೆಂದಡೆ
ನಿಮ್ಮ ಘನವೆನ್ನ ಮನಕ್ಕೆ ಸಾಧ್ಯವಾಗದ ಕಾರಣ,
ಅಂತಿಂತೆಂದುಪಮಿಸಲಮ್ಮದೆ ಇದ್ದೆ ನೋಡಯ್ಯಾ,
ನಿತ್ಯತೃಪ್ತಮಹಿಮಾ, ನಿಮಗೆಂದಳವಡಿಸಿದ ಪದಾರ್ಥವ
ಸುಚಿತ್ತದಿಂದವಧರಿಸಿ ಸಲಹಯ್ಯಾ ಪ್ರಭುವೆ, ಕೂಡಲಸಂಗಮದೇವಾ.