ಅಗ್ನಿಯಾಧಾರದಲ್ಲಿ ಕಬ್ಬುನ ನೀರುಂಬುದಯ್ಯಾ,

Category: ವಚನಗಳು

Author: ಬಸವಣ್ಣ

ಅಗ್ನಿಯಾಧಾರದಲ್ಲಿ ಕಬ್ಬುನ ನೀರುಂಬುದಯ್ಯಾ,
ಭೂಮಿಯಾಧಾರದಲ್ಲಿ ವೃಕ್ಷ ನೀರುಂಬುದಯ್ಯಾ,
ಜಂಗಮವಾಪ್ಯಾಯನವಾದಡೆ ಲಿಂಗ ಸಂತ್ಟುಯಹುದಯ್ಯಾ.
ವೃಕ್ಷಸ್ಯ ವದನಂ ಭೂಮಿಃ ಸ್ಥಾವರಸ್ಯ ಚ ಜಂಗಮಃ ಅಹಂ
ತುಷ್ಟೋsಡಿಸ್ಮ್ಯುಮಾದೇವಿ ಉಭಯೋರ್ಲಿಂಗಜಂಗಮಾತ್
ಇದು ಕಾರಣ ಕೂಡಲಸಂಗಮದೇವರಲ್ಲಿ ಜಂಗಮವಾಪ್ಯಾಯನವಾದಡೆ ಲಿಂಗಸಂತ್ಟು.