ಅಜ್ಞಾನ ಹಿಂಗಿತ್ತು, ಅಹಂಕಾರವಡಗಿತ್ತು,

Category: ವಚನಗಳು

Author: ಬಸವಣ್ಣ

ಅಜ್ಞಾನ ಹಿಂಗಿತ್ತು, ಅಹಂಕಾರವಡಗಿತ್ತು,
ಅರಿಷಡ್ವರ್ಗಂಗಳು ಹರಿಹಂಚಾದವು,
ಅಷ್ಟಮದಂಗಳು ಪಟ್ಟಪರಿಯಾದವು,
ದಶವಾಯುಗಳು ವಶವರ್ತಿಯಾದವು,
ಇಂದ್ರಿಯಂಗಳು ಬಂಧನವಡೆದವು, .
ಮನೋವಿಕಾರ ನಿಂದಿತ್ತು.
ಕೂಡಲಸಂಗಮದೇವಾ, ನಿಮ್ಮಲ್ಲಿ ನಮ್ಮ
ಮಹಾದೇವಿಯಕ್ಕಗಳ ನಿರ್ವಾಣದ ಸಹಜ ನಿಲವ ಕಂಡು,
ನಮೋ ನಮೋ ಎನುತಿರ್ದೆನಯ್ಯಾ, ಪ್ರಭುವೆ.