ಅರಿಯಲಿಲ್ಲದ ಅರಿವು ಅವಗ್ರಹಿಸಿತ್ತಾಗಿ,

Category: ವಚನಗಳು

Author: ಬಸವಣ್ಣ

ಅರಿಯಲಿಲ್ಲದ ಅರಿವು ಅವಗ್ರಹಿಸಿತ್ತಾಗಿ,
ಅರಿಯಲಿಲ್ಲದ ಮರೆಯಲಿಲ್ಲದ ನಿಜವು ನಿಂದಿತ್ತಾಗಿ,
ನಿರ್ನಾಮವಾಯಿತ್ತು, ನಿಃಪತಿಯಾಯಿತ್ತು, ಅಗಮ್ಯದಲ್ಲಿ
ಗಮನ ಕೆಟ್ಟಿತ್ತು, ನಿಂದಲ್ಲಿ ನಿರಾಳವಾಯಿತ್ತು,
ಕೂಡಲಸಂಗಮದೇವರಲ್ಲಿ ಶಬ್ದಮುಗ್ಧವಾಯಿತ್ತು.