ಅರಿವು ಮರವೆಯೊಳಡಗಿ, ಮರವೆ ಅರಿವಿನೊಳಡಗಿ,

Category: ವಚನಗಳು

Author: ಬಸವಣ್ಣ

ಅರಿವು ಮರವೆಯೊಳಡಗಿ, ಮರವೆ ಅರಿವಿನೊಳಡಗಿ,
ತೆರಹಿಲ್ಲದಿರ್ದೆನೆಂಬ ಹಮ್ಮಿದೇನೋ, ಹಮ್ಮಿದೇನೋ ಬ್ರಹ್ಮಾದ್ ಬ್ರಹ್ಮವ ನುಂಗಿ,
ಮತ್ತಾ ಪರಬ್ರಹ್ಮನು ತಾನೆಂದೆಂಬ ಹಮ್ಮಿದೇನೊ, ಹಮ್ಮಿದೇನೊ
ಆದಿ ಶೂನ್ಯವು ಶೂನ್ಯ, ಮಧ್ಯ ಶೂನ್ಯವು ಶೂನ್ಯ, ಅಂತ್ಯ ಶೂನ್ಯವು ಶೂನ್ಯ,
ಶೂನ್ಯವಾದ ಬಳಿಕ ಅಲ್ಲಿಂದತ್ತ ನಿಂದ ನಿಲವನಾರು ಬಲ್ಲರು ಹೇಳಾ ಬಯಲು
ಚಿತ್ರಿಸಿದ ಚಿತ್ರವನಾ ಬಯಲರಿಯದಂತೆ ಕೂಡಲಸಂಗಮದೇವಾ, ನಿಮ್ಮ ಶರಣರ ನಿಲವು.