ಅಡಿಗಡಿಗೆ ಲಿಂಗವನಡಿಯಡರಿ ನೋಡಿ ನೋಡಿ,

Category: ವಚನಗಳು

Author: ಬಸವಣ್ಣ

ಅಡಿಗಡಿಗೆ ಲಿಂಗವನಡಿಯಡರಿ ನೋಡಿ ನೋಡಿ,
ಕಂಗಳು ಕಡೆಗೋಡಿವರಿದವೆನಗಯ್ಯಾ, ಎನ್ನ ಅಶ್ರುಜಲಂಗಳು
ಆಲಿಕಲ್ಲ ರೂಹಿನಂತೆ, ಅರಗಿನ ಪುತ್ಥಳಿಯಂತೆತನು ಪುಳಕಿತವಾದ ಬೆಮರ ಬಿಂದುಗಳೆಲ್ಲಾ !
ಕೂಡಲಸಂಗನ ದರ್ಶನಸ್ಪರ್ಶದಿಂದ ಮನವೊಲಿದು ನೆರೆವ ಭರವನೇನ ಹೇಳುವೆನಯ್ಯಾ.