ಅತ್ತಲಿತ್ತ ಹೋಗದಂತೆ ಹೆಳವನ ಮಾಡಯ್ಯಾ ತಂದೆ
Category: ಶ್ರೀಶಿವ
Author: ಬಸವಣ್ಣ
ಅತ್ತಲಿತ್ತ ಹೋಗದಂತೆ ಹೆಳವನ
ಮಾಡಯ್ಯಾ ತಂದೆ
ಸುತ್ತಿ ಸುಳಿದು ನೋಡದಂತೆ ಅಂಧಕನ
ಮಾಡಯ್ಯಾ ತಂದೆ
ಮತ್ತೊಂದ ಕೇಳದಂತೆ ಕಿವುಡನ
ಮಾಡಯ್ಯಾ ತಂದೆ
ನಿಮ್ಮ ಶರಣರ ಪಾದವಲ್ಲದೆ
ಅನ್ಯ ವಿಷಯಕ್ಕೆಳಸದಂತೆ ಇರಿಸು
ಕೂಡಲಸಂಗಮದೇವಾ.