ಅರ್ಥ ಪ್ರಾಣ ಅಬಿsಮಾನವನೊಪ್ಪಿಸಿದಲ್ಲಿ ಭಕ್ತನಪ್ಪನೆ ಅಲ್ಲ.
Category: ವಚನಗಳು
Author: ಬಸವಣ್ಣ
ಅರ್ಥ ಪ್ರಾಣ ಅಬಿsಮಾನವನೊಪ್ಪಿಸಿದಲ್ಲಿ ಭಕ್ತನಪ್ಪನೆ ಅಲ್ಲ.
ಆದಿರುದ್ರನ ಮಗಳು ಆದಿಶಕ್ತಿ, ಆದಿಶಕ್ತಿಯ ಮಗ ವಿಷ್ಣು,
ವಿಷ್ಣುವಿನ ಅರ್ಧಾಂಗಿ ಲಕ್ಷ್ಮಿ. ಈ ತೊತ್ತಿನ ತೊತ್ತಿನ
ಪಡಿದೊತ್ತನೊಪ್ಪಿಸಿದಲ್ಲಿ ಭಕ್ತನಪ್ಪನೆ ಅಲ್ಲ. ಎನ್ನ ಮನದೊಡೆಯ ಮಹಾದೇವಾ,
ನಿಮ್ಮ ಮನವ ನಿಮಗೊಪ್ಪಿಸಿ ಶುದ್ಧ ನಾನು ಕಾಣಾ, ಕೂಡಲಸಂಗಮದೇವಾ.