ಅರ್ಥ ಪ್ರಾಣ ಅಭಿಮಾನದಲ್ಲಿ ವಂಚನೆುಲ್ಲದಿಹುದೆ ಭಕ್ತಿ,
Category: ವಚನಗಳು
Author: ಬಸವಣ್ಣ
ಅರ್ಥ ಪ್ರಾಣ ಅಭಿಮಾನದಲ್ಲಿ ವಂಚನೆುಲ್ಲದಿಹುದೆ ಭಕ್ತಿ,
ಹೆಚ್ಚು ಕುಂದಿಲ್ಲದಿಹುದೆ ಸಮಯಾಚಾರ, ಜಂಗಮವೆ
ಲಿಂಗವೆಂಬುದಕ್ಕೆ ಏನು ಗುಣ ಮನದ ಲಂಪಟತನ
ಹಿಂಗದಾಗಿ ಒಡೆಯರ ಬರವಿಂಗೆ ಕುನ್ನಿ ಬಾಲವ
ಬಡಿದಡೆ ವೆಚ್ಚವೇನು ಹತ್ತುವುದು ಕೂಡಲಸಂಗಮದೇವಾ