ನಾ ಪಾಪಿಯಾದರೂ ನನ್ನ ಕಡೆಗಾಲದಲಿ
Category: ಶ್ರೀದೇವಿ
Author: ವಚನವೇದ
ನಾ ಪಾಪಿಯಾದರೂ ನನ್ನ ಕಡೆಗಾಲದಲಿ
ನಿನ್ನ ಶ್ರೀನಾಮವನು ಜಪಿಸುತಿರಲು
ಮುಕ್ತಿಗೊಯ್ಯದೆ ನೀನು ಬಿಡುವಳೇನು?
ಸ್ತ್ರೀಹತ್ಯ ಪಶುಹತ್ಯ ಭ್ರೂಣ ಬ್ರಾಹ್ಮಣ ಹತ್ಯ
ಇನಿತೆಲ್ಲ ಪಾಪಗಳ ಮಾಡಿದ್ದರೂ
ನಿನ್ನ ಶ್ರೀಶುಭನಾಮ ನನ್ನ ದುರಿತವ ನೀಗಿ
ಬ್ರಹ್ಮಪದವಿಯ ಕಡೆಗೆ ಎತ್ತದೇನು?