ಅಂತಕನ ದೂತರಿಗೆ ಕಿಂಚಿತ್ತು ದಯವಿಲ್ಲ

Category: ವೈರಾಗ್ಯ

Author: ಪುರಂದರದಾಸ

ಅಂತಕನ ದೂತರಿಗೆ ಕಿಂಚಿತ್ತು ದಯವಿಲ್ಲ
ಚಿಂತೆಯನು ಬಿಟ್ಟು ಶ್ರೀ ಹರಿಯ ನೆನೆ ಮನವೆ ॥

ದಿವರಾತ್ರಿಯೆನ್ನದೆ ವಿಷಯ ಲಂಪಟನಾಗಿ
ಸವಿಯೂಟಗಳನುಂಡು ಭ್ರಮಿಸಬೇಡ `
ಅವನ ಕೊಂದಿವನ ಕೊಂದು ಅರ್ಥವನು ಗಳಿಸುವರೆ
ಜವನ ದೂತರು ಬರುವ ಹೊತ್ತ ನೀನರಿಯೆ ॥

ಅಟ್ಟಡಿಗೆಯುಣಲಿಲ್ಲ ಇಷ್ಟದರುಶನವಿಲ್ಲ
ಕೊಟ್ಟ ಸಾಲವ ಕೇಳ್ವ ಹೊತ್ತನರಿಯೆ
ಕಟ್ಲೆ ತುಂಬಿದ ಮೇಲೆ ಕ್ಷಣ ಮಾತ್ರ ಇರಲಿಲ್ಲ
ಅಷ್ಟರೊಳು ಪುರಂದರ ವಿಟ್ಫಲನ ನೆನೆ ಮನವೆ ॥