ನಮ್ಮಮ್ಮ ಶಾರದೆ ಉಮಾಮಹೇಶ್ವರಿ

Category: ಶ್ರೀಗಣೇಶ

Author: ಕನಕದಾಸ

ನಮ್ಮಮ್ಮ ಶಾರದೆ ಉಮಾಮಹೇಶ್ವರಿ
ನಿಮ್ಮೊಳಗಿಹನ್ಯಾರಮ್ಮಾ ||
ಕಮ್ಮ ಗೋಲನ ವೈರಿ ಸುತನಾದ ಸೊಂಡಿಲ
ಹೆಮ್ಮೆಯ ಗಣನಾಥನೇ ॥

ಮೋರೆ ಕಪ್ಪಿನ ಭಾವ ಮೊರದಗಲ ಕಿವಿ
ಕೋರೆದಾಡೆಯನ್ಯಾರಮ್ಮ
ಮೂರು ಕಣ್ಣನ ಸುತ ಮುಂದಿಟ್ಟ ಚಂದ್ರನ
ಧೀರತಾ ಗಣನಾಥನೇ ಅಮ್ಮಯ್ಕಾ ॥

ಉಟ್ಟದಟ್ಟಿಯು ಬಿಗಿದುಟ್ಟ ಚಲ್ಲಣದ
ಧಿಟ್ಟ ತಾನಿವನ್ಯಾರಮ್ಮ
ಪಟ್ಟದರಾಣಿ ಪಾರ್ವತಿಯ ಕುಮಾರ
ಹೊಟ್ಟೆಯ ಗಣನಾಥನೇ ಅಮ್ಮಯ್ಯ ॥

ರಾಸಿ ವಿದ್ಯೆಯ ಬಲ್ಲ ರಮಣಿಹಂಬುನೆಲ್ಲ
ಭಾಷಿಗನಿವನ್ಯಾರಮ್ಮ
ಲೇಸಾಗಿ ಸುಜನರ ಸಲಹುವ ನೆಲೆಯಾದಿ
ಕೇಶವನ ದಾಸಕಾಣೇ ಅಮ್ಮಯ್ಯ ||