ಆದ್ಯರಲ್ಲ ವೇದ್ಯರಲ್ಲ

Category: ಶ್ರೀಶಿವ

Author: ಅಲ್ಲಮ ಪ್ರಭು

ಆದ್ಯರಲ್ಲ ವೇದ್ಯರಲ್ಲ ಸಾಧ್ಯರಲ್ಲದ ಹಿರಿಯರ ನೋಡಾ.
ತನುವಿಕಾರ ಮನವಿಕಾರ ಇಂದ್ರಿಯವಿಕಾರದ ಹಿರಿಯರ ನೋಡಾ.
ಶಿವಚಿಂತೆ ಶಿವಜ್ಞಾನಿಗಳ ಕಂಡಡೆ, ಆಳವಾಡಿ ನುಡಿವರು,
ಗುಹೇಶ್ವರನರಿಯದ ಕರ್ಮಿಗಳು