ಅದ್ವೈತವ ನುಡಿದು

Category: ಶ್ರೀಶಿವ

Author: ಅಲ್ಲಮ ಪ್ರಭು

ಅದ್ವೈತವ ನುಡಿದು ಅಹಂಕಾರಿಯಾದೆನಯ್ಯಾ.
ಬ್ರಹ್ಮವ ನುಡಿದು ಭ್ರಮಿತನಾದೆನಯ್ಯಾ.
ಶೂನ್ಯವ ನುಡಿದು ನಾನು ಸುಖದುಃಖಕ್ಕೆ ಗುರಿಯಾದೆನಯ್ಯಾ.
ಗುಹೇಶ್ವರಾ ನಿಮ್ಮ ಶರಣ ಸಂಗನಬಸವಣ್ಣನ ಸಾನ್ನಿಧ್ಯದಿಂದ
ನಾನು ಸದ್ಭಕ್ತನಾದೆನಯ್ಯಾ