ಜಗದೋದ್ಧಾರನ ಆಡಿಸಿದಳೆಶೋದೆ
Category: ಶ್ರೀಕೃಷ್ಣ
Author: ಪುರಂದರದಾಸ
ಜಗದೋದ್ಧಾರನ ಆಡಿಸಿದಳೆಶೋದೆ || ಪ ||
ಜಗದೋದ್ಧಾರನ ಮಗನೆಂದು ತಿಳಿಯುತ
ಸುಗುಣಾಂತ ರಂಗನ ಆಡಿಸಿದಳೆಶೋದೆ || ಅ.ಪ ||
ನಿಗಮಕೆ ಸಿಲುಕದ ಅಗಣಿತ ಮಹಿಮನ
ಮಗುಗಳ ಮಾಣಿಕ್ಯನ ಆಡಿಸಿದಳೆಶೋದೆ || ೧ ||
ಅಣೋರಣೀಯನ ಮಹತೋ ಮಹಿಮನ
ಅಪ್ರಮೇಯನ ಆಡಿಸಿದಳೆಶೋದೆ || ೨ ||
ಪರಮ ಪುರುಷನ ಪರವಾಸುದೇವನ
ಪುರಂದರ ವಿಠಲನ ಆಡಿಸಿದಳೆಶೋದೆ || ೩ ||