ಏನೆ ಮನವಿತ್ತೆ ಲಲಿತಾಂಗಿ

Category: ಶ್ರೀಕೃಷ್ಣ

Author: ಕನಕದಾಸ

ಏನೆ ಮನವಿತ್ತೆ ಲಲಿತಾಂಗಿ ಅಸ
ಮಾನ ಗೋವಳ ಕುಲವಿಲ್ಲದವನೊಳು ||ಪ||

ಮಗಗೆ ಮೈದುನನಾದ ಮಗಳಿಗೆ ಪತಿಯಾದ
ಮಗಳಿಗಳಿಯನಾದ ಅಳಿಯಗಳಿಯನಾದ ||1||

ಮಗಳ ಮಗಗೆ ಮೈದುನನಾಗಿ ಮಾವನ
ಜಗವರಿಯಲು ಕೊಂದ ಕುಲಗೇಡಿ ಗೋವಳ ||2||

ಅತ್ತೆಗೆ ವಲ್ಲಭನಾದ ಭೃತ್ಯರಿಗಾಳಾದ
ಚಿತ್ತ ಒಲಿದು ಚೆನ್ನ ಆದಿಕೇಶವನೊಳು ||3||