ಕಾಯೊ ಎನ್ನನು ದೇವ

Category: ಶ್ರೀಕೃಷ್ಣ

Author: ಕನಕದಾಸ

ಕಾಯೊ ಎನ್ನನು ದೇವ ಕಡೆ ಹಾಯಿಸೊ ಕಡಲೊಡೆಯ
ಕಾಯಯ್ಯ ನೀ ಎನ್ನ ಕಮಲದಳಾಕ್ಷ

ಒಂದು ಕಾಯಲಿ ನಾನು ಒಲಿದು ದಂಡಿಗೆಯಾದೆಎರಡು ಕಾಯಲಿ ನಾನು ವೀಣೆಯಾದೆಮೂರು ಕಾಯಲಿ ನಾನು ಮುದ್ದು ಕಿನ್ನರಿಯಾದೆನೀಟಾದ ಕಾಯಲಿ ನಾನು ನಾಗಸ್ವರವಾದೆ ||1||

ದಪ್ಪ ದಪ್ಪ ಕಾಯಲಿ ದರವೇಶಿಗಳಿಗಾದೆಮಿಕ್ಕ ಕಾಯಲಿ ನಾನು ಸನ್ನೇಸಿಗಳಿಗಾದೆಕೈತಪ್ಪಿ ಬಿದ್ದರೆ ಕದಿರಿಗೆ ಬಿಲ್ಲಾದೆಮತ್ತೆ ದೇವರ ಗುಡಿಗೆ ದೀಪವೇ ನಾನಾದೆ ||2||

ಚಿಕ್ಕಂದು ಮೊದಲು ನಾ ಸಾಸೂವೆ ಕಾಯಾದೆಚಿಕ್ಕ ಚಿನ್ಮಯಗೆ ಬುರುಡೆಯಾದೆಉಕ್ಕುವಾ ಹೊಳೆಯಲ್ಲಿ ತೆಪ್ಪವೇ ನಾನಾದೆಚೊಕ್ಕ ಕನಕಪ್ಪನ ಹಿಂದೆ ನಾ ತಿರುಪತಿಗೆ ಬಂದೆ||3||