ಮಣ್ಣಿನ ಮಹಿಮೆ ಮನುಜ ನೀನರಿಯೆ

Category: ಇತರೆ

Author: ಕನಕದಾಸ

ಮಣ್ಣಿನ ಮಹಿಮೆ ಮನುಜ ನೀನರಿಯೆ
ಷಣ್ಮಹಿಷಿಯುತ ಸರ್ವೋತ್ತಮನ ಲೀಲೆ ||ಪ||

ಮಣ್ಣಲಿ ದೊರಕಿದಳು ಮಾತಾಯಿ ಸೀತಾ
ಮಣ್ಣಳೆದ ವಾಮನ ಮಹಬಲಿಯ ಬೇಡಿ
ಮಣ್ಣು ಪಾವನವಾಯ್ತು ರಾಮಪದ ಸ್ಪರ್ಶದಿ
ಮಣ್ಣುಂಡ ಬಾಯಲಿ ಬ್ರಹ್ಮಾಂಡ ತೋರಿದ ಕೃಷ್ಣ ||1||

ಮಣ್ಣಿಗೇ ನಡೆಯಿತು ಮಹಾಭಾರತ ಯುದ್ಧ
ಮಣ್ಣಿಗೇ ಮಡಿದರ ಸಂಖ್ಯೆಗೆಣೆಯಿಲ್ಲ
ಮಣ್ಣಲಿ ಬಿತ್ತೆ ಬೀಜ ಮಹಾವೃಕ್ಷವಾಗುವುದು
ಅಣ್ಣ ನಮ್ಮಾದಿಕೇಶವನ ಅನುಗ್ರಹದಿಂ ||2||