ಶಿವ ಶಿವ ಶಿವ ಎನ್ನಿರೊ - ಮೂಜಗದವರೆಲ್ಲ
Category: ಶ್ರೀಶಿವ
ಶಿವ ಶಿವ ಶಿವ ಎನ್ನಿರೊ - ಮೂಜಗದವರೆಲ್ಲಶಿವ ಶಿವ ಶಿವ ಎನ್ನಿರೊ
ಆಗಮ ಸಿದ್ಧಾಂತ ಮೂಲದ ಜಪವಿದು ಶಿವಶಿವಶಿವ ಎನ್ನಿರೋ - ನಿಮ್ಮರೋಗದ ಮೂಲವ ಕೆಡಿಪ ಔಷಧವಿದು ಶಿವಶಿವಶಿವ ಎನ್ನಿರೊ ||1||
ಮನುಜ ಜನ್ಮದಿ ಹುಟ್ಟಿ ಮೈಮರೆದಿರಬೇಡಿ ಶಿವಶಿವಶಿವ ಎನ್ನಿರೋ - ನಿಮ್ಮತನುಮನ ಪ್ರಾಣವ ವ್ಯರ್ಥವ ಮಾಡದೆ ಶಿವಶಿವಶಿವ ಎನ್ನಿರೊ ||2||
ಅಪರಾಧಕೋಟಿ ತ್ಯಜಿಸಬೇಕಾದರೆ ಶಿವಶಿವಶಿವ ಎನ್ನಿರೋ - ಮುಂದೆಉಪಮಿತರೋರ್ಮಿತರರಿಯದ ಜಪವಿದು ಶಿವಶಿವಶಿವ ಎನ್ನಿರೊ||3||
ಜವನ ಬಾಧೆಯ ನೀವು ಜಯಿಸಬೇಕಾದರೆ ಶಿವಶಿವಶಿವ ಎನ್ನಿರೋ - ನಿಜಸವಿಮಲ ಮುಕ್ತಿಯ ಪಡೆಯಬೇಕಾದರೆ ಶಿವಶಿವಶಿವ ಎನ್ನಿರೊ ||4||
ಭುವನಕೆ ಬಲ್ಲಿದರಾಗಬೇಕಾದರೆ ಶಿವಶಿವಶಿವ ಎನ್ನಿರೋ - ನೀವುಭವನ ಪದವಿಯನು ಪಡೆಯಬೇಕಾದರೆ ಶಿವಶಿವಶಿವ ಎನ್ನಿರೊ ||5||
ಗುರುಲಿಂಗ ಜಂಗಮವ ಅರಿಯಬೇಕಾದರೆ ಶಿವಶಿವಶಿವ ಎನ್ನಿರೋ - ಮುಂದೆಪರಮಾತ್ಮನ ನೀವು ತಿಳಿಯಬೇಕಾದರೆ ಶಿವಶಿವಶಿವ ಎನ್ನಿರೊ||6||
ಪೃಥ್ವಿಗೆ ಸದ್ಗುರು ಆಗಬೇಕಾದರೆ ಶಿವಶಿವಶಿವ ಎನ್ನಿರೋ - ನೀವುತತ್ತ್ವಪತಿ ಆದಿಕೇಶವನ ಕೂಡಬೇಕಾದರೆ ಶಿವಶಿವಶಿವ ಎನ್ನಿರೊ||7||